ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರ ತಾಲ್ಲೂಕಿನ ಯಸಳೂರು ಗ್ರಾಮದಲ್ಲಿ ನಡೆದಿದೆ.
ಬಾಲಕಿ ಲೋಕೇಶ್ ಎಂಬುವವನನ್ನು ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಆಕೆ ಮತ್ತೋರ್ವ ಅಪ್ರಾಪ್ತ ಬಾಲಕನೊಂದಿಗೆ ಸುತ್ತಾಡುತ್ತಿದ್ದಳು. ಮಂಗಳವಾರ ಬಾಲಕನೊಂದಿಗೆ ಆಕೆ ಬೈಕ್‌ನಲ್ಲಿ ಜಾಲಿ ರೈಡ್ ಹೋಗಿದ್ದಳು. ಇದನ್ನು ನೋಡಿ ಲೊಕೇಶ್ ಬಾಲಕಿಯನ್ನ ಪ್ರಶ್ನಿಸಿದ್ದಾನೆ.
ಲೋಕೇಶ್ ಅಪ್ರಾಪ್ತ ಬಾಲಕಿ ಮೇಲೆ ಪದೇ ಪದೇ ಅನುಮಾನಗೊಳ್ಳುತ್ತಿದ್ದ ಮತ್ತು ಆಕೆಯೊಂದಿಗೆ ಜಗಳಕ್ಕಿಳಿಯುತ್ತಿದ್ದ. ಇದರಿಂದ ಮನನೊಂದ ಬಾಲಕಿ ಬುಧವಾರದಂದು ವಿಷ ಕುಡಿದಿದ್ದಾಳೆ.
ವಿಷ ಸೇವಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಹಾಸನದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.